ಶಿವಮೊಗ್ಗ: ಶರಾವತಿ ನದಿಯ ನೀರನ್ನು ಯಾವುದೇ ಕಾರಣಕ್ಕೂ ಬೆಂಗಳೂರಿಗೆ ತೆಗೆದುಕೊಂಡು ಹೋಗುವುದಕ್ಕೆ ಬಿಡುವುದಿಲ್ಲ ಎಂದು ಸಚಿವ ಕೆ.ಎಸ್. ಈಶ್ವರಪ್ಪ ಸ್ಪಷ್ಟಪಡಿಸಿದ್ದಾರೆ.

ಮಾಧ್ಯಮದವರ ಜೊತೆ ಮಾತನಾಡಿದ ಸಚಿವರು, ಶರಾವತಿ ನೀರನ್ನು ಬೆಂಗಳೂರಿಗೆ ತೆಗೆದುಕೊಂಡು ಹೋಗುವ ಪ್ರಶ್ನೆಯೇ ಇಲ್ಲ. ಈ ಬಗ್ಗೆ ಅದು ಯಾವ ಮಹಾನುಭಾವರು ಪ್ರಸ್ತಾವನೆ ಸಲ್ಲಿಸಿದರೋ ನನಗಂತೂ ಗೊತ್ತಿಲ್ಲ. ಹಾಗೇನಾದರೂ ಮಾಡಿದರೆ ಇದೊಂದು ಹುಚ್ಚು ದರ್ಬಾರ್ ಆಗುತ್ತೆ ಎಂದು ಹೇಳಿದ್ದಾರೆ.