ದಾವಣಗೆರೆ: ಲಿಂಗಾಯಿತ ವೀರಶೈವ  ಮುಖಂಡರು ಕಾಂಗ್ರೆಸ್ ಪಕ್ಷದದಲ್ಲಿ ಹಿರಿಯರು ಆದ ಶಾಮನೂರು ಶಿವಶಂಕರಪ್ಪ ಅವರಿಗೆ ಸಚಿವ ಸ್ಥಾನ ದೊರೆಯದೇ ಇರುವುದಕ್ಕೆ ಮನನೊಂದು ದಾವಣೆಗರೆ ಕಾರ್ಪೋರೇಟರ್ ಶಿವಗಂಗಾ ಸ್ಥಾನಕ್ಕೆ ರಾಜೀನಾಮೇ ನೀಡಿದ್ದಾರೆ.

ಕೆಟಿಜೆ ನಗರ ಕಾರ್ಪೋರೇಟರ್ ಆಗಿರುವ ಶಿವಗಂಗಾ ಬಸವರಾಜ್ ಮಹಾನಗರ ಪಾಲಿಕೆ ಆಯುಕ್ತರನ್ನು ಭೇಟಿ ಮಾಡಿ ತಮ್ಮ ಕಾರ್ಪೋರೇಟರ್ ಸ್ಥಾನಕ್ಕೆ ರಾಜೀನಾಮೆ ನೀಡಿದರು.

ಶಾಮನೂರು ಶಿವಶಂಕರಪ್ಪ ಅವರು, ಕಳೆದ 45 ವರ್ಷಗಳಿಂದ ಕಾಂಗ್ರೆಸ್ ನಲ್ಲಿ ಗುರುತಿಸಿಕೊಂಡಿದ್ದರು. ಆದರೆ ವೀರಶೈವ ಲಿಂಗಾಯತ ನಾಯಕರಿಗೆ ಸಚಿವ ಸ್ಥಾನ ನೀಡದೇ ಇರುವುದು ಅನ್ಯಾಯ. ಈ ಕುರಿತು ಬೆಂಬಲಿಗರು ಕೂಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶಾಮನೂರು ಶಿವಶಂಕರಪ್ಪರಿಗೆ ಸಚಿವ ಸ್ಥಾನ ನೀಡದಿದ್ದರೆ ಮಹಾನಗರ ಪಾಲಿಕೆಯ ಸದಸ್ಯರು ನೀಡುತ್ತಾರೆ ಎಂದು ಹೇಳಿದ್ದಾರೆ