ಬೆಂಗಳೂರು: ಕೊರೋನಾ ಸೋಂಕು ತೀವ್ರವಾಗಿ ವ್ಯಾಪಿಸುತ್ತಿರುವ ಮಧ್ಯೆ ಶಾಲಾ ಕಾಲೇಜುಗಳನ್ನು ಯಾವುದೇ ಕಾರಣಕ್ಕೂ ತೆರಯುವುದಿಲ್ಲ. ಈ ಬಗ್ಗೆ ಪೋಷಕರು ಮತ್ತು ವಿದ್ಯಾರ್ಥಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

ಶಾಲೆಗಳನ್ನು ತೆರೆಯುವ ಬಗ್ಗೆ ರಾಜ್ಯ ಸರ್ಕಾರ ಯಾವುದೇ ತೀರ್ಮಾನ ಕೈಗೊಂಡಿಲ್ಲವೆಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಶಾಲೆಗಳನ್ನು ಪ್ರಾರಂಭಿಸುವ ಬಗ್ಗೆ ಚರ್ಚೆಗಳು ನಡೆಯುತ್ತಿದ್ದು, ಈ ಬಗ್ಗೆ ಮಾಧ್ಯಮಗಳು ಕೂಡ ಅಭಿಯಾನ ಆರಂಭಿಸಿರುವುದನ್ನು ಗಮನಿಸಿರುವುದಾಗಿ ಮುಖ್ಯಮಂತ್ರಿಗಳು ಹೇಳಿದ್ದಾರೆ.