ಬೆಂಗಳೂರು: ಮತದಾರರಿಗೆ ಹಣ ಹಂಚಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಮಹಿಳಾ ಘಟಕ ಅಧ್ಯಕ್ಷೆ ಹಾಗೂ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್‌ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಜಾಮೀನು ರಹಿತ ವಾರಂಟ್‌ ಜಾರಿಗೊಳಿಸಿದೆ.

ವಿಚಾರಣೆಗೆ ಹಾಜರಾಗುವಂತೆ ನ್ಯಾಯಾಲಯವು ಎರಡು ಬಾರಿ ಸಮನ್ಸ್‌ ಜಾರಿಗೊಳಿಸಿತ್ತು. ಆದರೂ ಲಕ್ಷ್ಮೇ ಹೆಬ್ಬಾಳ್ಕರ್‌ ವಿಚಾರಣೆಗೆ ಗೈರಾಗಿದ್ದರು. ಲಕ್ಷ್ಮೀ ಹೇಳಿಕೆ ದಾಖಲಿಸಿಬೇಕಿರುವ ಕಾರಣ ನ್ಯಾಯಾಲಯವು ಜಾಮೀನು ರಹಿತ ವಾರಂಟ್‌ ಜಾರಿಗೊಳಿಸಿ ಆದೇಶ ಹೊರಡಿಸಿದೆ.