ಬೆಂಗಳೂರು: ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭ ಇಂದು ಮದ್ಯಾಹ್ನ 3:50 ಕ್ಕೆ ರಾಜಭವನದಲ್ಲಿ ನಡೆಯಲಿದೆ. ಈಗಾಗಲೇ 7 ಜನರು ಹೊಸದಾಗಿ ಸಿಎಂ ಯಡಿಯೂರಪ್ಪ ಅವರ ಸಂಪುಟ ಸೇರುವುದು ಕಾತರಿಯಾಗಿದೆ. ಆದರೆ ಉಪ ಚುನಾವಣೆಯಲ್ಲಿ ಭರ್ಜರಿ ಜಯಗಳಿಸಿರುವ ಆರ್‌ಆರ್ ನಗರ ಶಾಸಕ ಮುನಿರತ್ನ ಅವರು ಸಂಪುಟ ಸೇರಲು ಇನ್ನೂ ಬಿಜೆಪಿ ಹೈಕಮಾಂಡ್ ಗ್ರೀನ್ ಸಿಗ್ನಲ್ ಕೊಟ್ಟಿಲ್ಲ ಎಂಬ ಮಾಹಿತಿ ಬಿಜೆಪಿ ವಲಯದಿಂದಲೇ ಕೇಳಿ ಬರುತ್ತಿದೆ.

ಹೀಗಾಗಿ 8ನೇ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಬೇಕಿದ್ದ ಶಾಸಕ ಮುನಿರತ್ನ ಅವರು ಸಂಪುಟ ಸೇರುವ ಬಗ್ಗೆ ಹೈಕಮಾಂಡ್ ಇನ್ನೂ ಒಪ್ಪಿಗೆ ಕೊಟ್ಟಿಲ್ಲ ಎಂಬ ಮಾತು ಕೇಳಿ ಬರುತ್ತಿದೆ. ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರು ಬೆಳಗ್ಗೆ 9:30 ಕ್ಕೆ ಬೆಂಗಳೂರಿಗೆ ಬರಲಿದ್ದು, ಬಳಿಕ 10 ಗಂಟೆಗೆ ಮುನಿರತ್ನ ಅವರು ಸಂಪುಟ ಸೇರುವ ಬಗ್ಗೆ ಅಂತಿಮ ತೀರ್ಮಾನವಾಗಲಿದೆ.