ಬೆಂಗಳೂರು: ಶಿಕ್ಷಕರ ದಿನಾಚರಣೆ ಅಂಗವಾಗಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಶಿಕ್ಷಕರಿಗೆ ಶುಭ ಕೋರಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ನಾಡಿನ ಎಲ್ಲ ಶಿಕ್ಷಕರಿಗೆ ಶಿಕ್ಷಕರ ದಿನದ ಹಾರ್ದಿಕ ಶುಭಾಶಯಗಳು. ಮಾಜಿ ರಾಷ್ಟ್ರಪತಿಗಳಾದ ಭಾರತರತ್ನ ಡಾ.ಸರ್ವೆಪಲ್ಲಿ ರಾಧಾಕೃಷ್ಣನ್ ಅವರ ಜಯಂತಿಯಂದು ಅವರ ಸಂಸ್ಮರಣೆಗಳ ಜೊತೆಗೆ ಕೊರೋನಾ ಪರಿಸ್ಥಿತಿಗಳ ವಿಭಿನ್ನ ಸವಾಲುಗಳ ನಡುವೆಯೂ ಕರ್ತವ್ಯ ನಿಷ್ಠರಾಗಿರುವ ನಮ್ಮ ಶಿಕ್ಷಕರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.