ಬೆಂಗಳೂರು: ವಿಧಾನಸಭಾ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಇಂದು ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದು, ಗುತ್ತಿಗೆ ಆಧಾರದ ಮೇಲೆ ನೇಮಕಗೊಂಡಿರುವ ಶಿಕ್ಷಕರು ಮತ್ತು ಅತಿಥಿ ಉಪನ್ಯಾಸಕರಿಗೆ ಕೊವಿಡ್ ಅವಧಿಯ ಗೌರವ ಧನವನ್ನು ನೀಡಿ ಎಂದು ಒತ್ತಾಯಿಸಿದ್ದಾರೆ.

ಈ ವೇಳೆ, ಪ್ರೌಢಶಾಲೆಗಳ ಸಹ ಶಿಕ್ಷಕರಿಗೆ ಬಡ್ತಿ ನೀಡಿ, ಅನುದಾನಿತ ಶಾಲಾ-ಕಾಲೇಜುಗಳಿಗೆ ಬಾಕಿ ಇರುವ ಅನುದಾನವನ್ನು ಬಿಡುಗಡೆ ಮಾಡಿ. ಶಾಲಾ-ಕಾಲೇಜುಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಿ ಎಂದು ಒತ್ತಾಯಿಸಿ ಮನವಿ ಪತ್ರ ಬರೆದಿದ್ದಾರೆ.