ಬೆಂಗಳೂರು: ಕೊರೋನಾ ಹಿನ್ನೆಲೆಯಲ್ಲಿ SSLC ಪರೀಕ್ಷೆ ರದ್ದು ಮಾಡಲು ಶಿಕ್ಷಣ ತಜ್ಞರು ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ.

ಜೂನ್ 2 ಅಥವಾ 3ನೇ ವಾರದಲ್ಲಿ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಸಿದ್ಧತೆ ನಡೆಸಿದೆ. ಆದರೆ, ಈ ಬಾರಿಯ SSLC. ಪರೀಕ್ಷೆಯನ್ನು ರದ್ದುಪಡಿಸಿ ಶಾಲಾ ಹಂತದಲ್ಲಿ ನಡೆದಿರುವ ಸಿದ್ಧತಾ ಪರೀಕ್ಷೆ ಹಾಗೂ ಆಂತರಿಕ ಪರೀಕ್ಷೆಗಳಲ್ಲಿ ಮಕ್ಕಳ ಸಾಧನೆಯನ್ನು ಆಧರಿಸಿ ತೇರ್ಗಡೆ ಮಾಡಬೇಕು ಎಂದು ಶಿಕ್ಷಣ ತಜ್ಞ ವಿ.ಪಿ. ನಿರಂಜನರಾಧ್ಯ ಸಿಎಂಗೆ ಮನವಿ ಮಾಡಿದ್ದಾರೆ.!