ಕಾಶ್ಮೀರ: ದೇಶದ ವಿವಿಧ ರಾಜ್ಯಗಳಲ್ಲಿ ಇಂದು ವಿಧಾನಸಭಾ ಹಾಗೂ ಉಪಚುನಾವಣಾ ಫಲಿತಾಂಶ ಹೊರ ಬೀಳಲಿರುವ ನಡುವೆಯೇ ಜಮ್ಮು-ಕಾಶ್ಮೀರದಲ್ಲಿ ಉಗ್ರರ ಉಪಟಳ ಮುಂದುವರೆದಿದೆ.

ಜಮ್ಮು-ಕಾಶ್ಮೀರದ ಶೋಫಿಯಾನ್ ನಲ್ಲಿ ಭಾರತೀಯ ಸೇನೆ ಇಬ್ಬರು ಉಗ್ರರನ್ನು ಹತ್ಯೆಗೈದಿದೆ. ಶೋಫಿಯಾನ್ ನ ಕಟ್ ಪೋರಾದಲ್ಲಿ ನಡೆದ ಸೇನಾ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರನ್ನು ಸದೆಬಡಿಯಲಾಗಿದೆ.

ಈ ಉಗ್ರರು ಯಾವ ಸಂಘಟನೆಗೆ ಸೇರಿದವರು ಎಂಬ ಬಗ್ಗೆ ಇನ್ನೂ ಮಾಹಿತಿ ಲಭ್ಯವಾಗಿಲ್ಲ. ಇನ್ನೊಂದೆಡೆ ಉಗ್ರರ ವಿರುದ್ಧ ಕಾರ್ಯಾಚರಣೆ ಕೂಡ ಮುಂದುವರೆದಿದೆ.