ಬೆಂಗಳೂರು: ಆರೋಗ್ಯ ಸಚಿವ ಶ್ರೀರಾಮುಲು ರಾಜೀನಾಮೆ ನೀಡಲಿ ಎಂದು ಮಾಜಿ ಸಂಸದ ಉಗ್ರಪ್ಪ ಆಗ್ರಹಿಸಿದ್ದು ಈ ಕಾರಣಕ್ಕೆ.

ಆರೋಗ್ಯ ಸಚಿವ ಬಿ. ಶ್ರೀರಾಮುಲು ಅವರು ಚೆಳ್ಳಕೆರೆಯ ನದಿಯಲ್ಲಿ ಬಾಗಿನ ಬಿಡುವ ವೇಳೆ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ, ಮಾಸ್ಕ್ ಧರಿಸದೇ, ಸಾವಿರಾರು ಜನರು ಸೇರುವ ಮೂಲಕ ಲಾಕ್​ಡೌನ್ ಮಾರ್ಗಸೂಚಿ ಉಲ್ಲಂಘನೆಯಾಗಿದೆ.

ಸಚಿವರು ಮತ್ತು ಬೆಂಬಲಿಗರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಸೂಕ್ತ ಕ್ರಮಕೈಗೊಳ್ಳುವುದರ ಜೊತೆಗೆ, ಸಚಿವ ಸ್ಥಾನಕ್ಕೆ ಶ್ರೀರಾಮುಲು ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕೆಂದು ಹೇಳಿದ್ದಾರೆ.