ಚಿತ್ರದುರ್ಗ:ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ 2020-21ನೇ ಸಾಲಿನ ಸಾಮಾನ್ಯ, ವಿಶೇಷ ಘಟಕ ಮತ್ತು ಗಿರಿಜನ ಉಪಯೋಜನೆಯಡಿ ಸಂಘ ಸಂಸ್ಥೆಗಳಿಗೆ ಧನಸಹಾಯ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಡಿಸೆಂಬರ್ 27 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

 ನಾಡಿನ ಕಲೆ, ಕನ್ನಡ ಭಾಷೆ, ಸಾಹಿತ್ಯ, ಸಂಗೀತ-ನೃತ್ಯ,ಜಾನಪದ, ನಾಟಕ, ಯಕ್ಷಗಾನ, ಚಿತ್ರಕಲೆ, ಶಿಲ್ಪಕಲೆ ಮುಂತಾದ ಸೃಜನಶೀಲ ಕಲಾ ಪ್ರಕಾರಗಳಲ್ಲಿ ಉಳಿಸಿ ಬೆಳೆಸುವ ಸಲುವಾಗಿ ಕನ್ನಡ ಮತ್ತು ಸಂಸ್ಕøತಿ ಇಲಾಖೆಯಿಂದ 2020-21ನೇ ಸಾಲಿನ ಸಾಮಾನ್ಯ, ವಿಶೇಷ ಘಟಕ ಮತ್ತು ಗಿರಿಜನ ಉಪಯೋಜನೆಯಡಿ ನೋಂದಾಯಿತ ಸಾಂಸ್ಕøತಿಕ ಸಂಘ-ಸಂಸ್ಥೆಗಳು ಏರ್ಪಡಿಸುವ ಸಾಹಿತ್ಯ ಮತ್ತು ಸಾಂಸ್ಕøತಿಕ ಕಾರ್ಯಕ್ರಮಗಳಿಗೆ ಧನಸಹಾಯ, ಅಸಂಘಟಿತ ತಂಡಗಳು, ಏಕವ್ಯಕ್ತಿ, ಕಲಾವಿದರಿಗೆ ವಾದ್ಯಪರಿಕರ, ವೇಷಭೂಷಣ ಖರೀದಿಗೆ ಧನಸಹಾಯ, ಚಿತ್ರಕಲೆ ಮತ್ತು ಶಿಲ್ಪಕಲೆಗಳ ಏಕವ್ಯಕ್ತಿ ತಂಡದ ಕಲಾವಿದರಿಗೆ ಕಲಾಕೃತಿಗಳ ಪ್ರದರ್ಶನ ಏರ್ಪಡಿಸಲು ಧನಸಹಾಯ ನೀಡಲಾಗುವುದು.

 ಈ ಮೂರು ಯೋಜನೆಗಳಿಗೆ ಧನಸಹಾಯ ನೀಡಲು ಸೇವಾಸಿಂಧು sevasindhu.karnatka.gov.in  ಮುಖಾಂತರ ನವೆಂಬರ್ 26 ರಿಂದ ಡಿಸೆಂಬರ್ 27 ರವರೆಗೆ ಕಾಲಾವಕಾಶ ನೀಡಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

 ಪ್ರಸಕ್ತ ಸಾಲಿನ ಸರ್ಕಾರದ ಆದೇಶ ಸಂಖ್ಯೆ, ಮಾರ್ಗಸೂಚಿಯನ್ನು ಸೇವಾಸಿಂಧು ಪೋರ್ಟಲ್ ಹಾಗೂ ಇಲಾಖೆಯ ವೆಬ್‍ಸೈಟ್ www.kannadasiri.karnatka.gov.in ನಲ್ಲಿ ಅಳವಡಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ 080-22230282, 080-22279954 ಅನ್ನು ಸಂಪರ್ಕಿಸಬಹುದು. ನಿಗಧಿತ ದಿನಾಂಕದ ನಂತರ ಸಲ್ಲಿಸುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಹಾಗೂ ಅರ್ಜಿಗಳನ್ನು ನೇರವಾಗಿ ಇಲಾಖೆಯಲ್ಲಿ ಸ್ವೀಕರಿಸುವುದಿಲ್ಲ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.