ಹೊಸಪೇಟೆ; ಅರಣ್ಯ ಸಚಿವ ಆನಂದ್ ಸಿಂಗ್ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಶುಕ್ರವಾರ ಅವರು ಕೋವಿಡ್ ಟೆಸ್ಟ್ ಮಾಡಿಸಿದ್ದರು.

ಶನಿವಾರ ರಾತ್ರಿ ವರದಿ ಸಿಕ್ಕಿದ್ದು, ಕೊರೋನಾ ಇರುವುದು ಖಚಿತವಾಗಿದೆ. ರೋಗಲಕ್ಷಣವಿಲ್ಲದ ಕಾರಣ, ಸದ್ಯ ಆನಂದ್ ಸಿಂಗ್ ಅವರು ಹೊಸಪೇಟೆ ನಿವಾಸದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸಚಿವರು ಆರೋಗ್ಯವಾಗಿದ್ದಾರೆ. ಅವರಿಗೆ ಕೊರೋನಾ ಸೋಂಕು ತಗುಲಿರುವುದು ನಿಜ ಎಂದು ಕುಟುಂಬ ಮೂಲಗಳು ತಿಳಿಸಿವೆ.