ಬೆಂಗಳೂರು: ಸಿ.ಟಿ.ರವಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಆಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಸಚಿವ ಸಿ.ಟಿ.ರವಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಸಿಎಂ ಯಡಿಯೂರಪ್ಪ ಅವರಿಗೆ ಶನಿವಾರ ಸಿ.ಟಿ.ರವಿ ರಾಜೀನಾಮೆ ಸಲ್ಲಿಸಿದ್ದಾರೆ ಅಂತ ತಿಳಿದು ಬಂದಿದೆ.
ಬಿಜೆಪಿಯಲ್ಲಿ ಓರ್ವ ವ್ಯಕ್ತಿಗೆ ಒಂದೇ ಹುದ್ದೆ ಎಂಬ ನಿಯಮವಿರುವ ಹಿನ್ನಲೆಯಲ್ಲಿ ಸಿ.ಟಿ ರವಿಯವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.