ಬೆಂಗಳೂರು: ಜೆಡಿಎಸ್ ಕಾಂಗ್ರೆಸ್ನ ಸಮ್ಮಿಶ್ರ ಸರ್ಕಾರದಲ್ಲಿ ಸಚಿವ ಸಂಪುಟ ರಚನೆಯಾದ ನಂತರ ಸಚಿವ ಸ್ಥಾನಕ್ಕಾಗಿ ಕಾಂಗ್ರೆಸ್ ನಲ್ಲಿ ಭಿನ್ನಮತ ದವರ ಗುಂಪು ದೊಡ್ಡದಾಗಿದೆ. ಮೊನ್ನೆ ತಾನೆ ಸಚಿವ ಸ್ಥಾನ ಸಿಗಲಿಲ್ಲ ಎಂಬಕಾರಣಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನಕ್ಕೆ ಎಸ್.ಆರ್.ಪಾಟೀಲ್ ರಾಜೀನಾಮೆ ನೀಡಿದರು. ಅದರಂತೆ ಸಚಿವ ಸ್ಥಾನ ಸಿಗದಿದ್ದರಿಂದ ಶಾಸಕ ಸತೀಶ್ ಜಾರಿಕಿಹೊಳಿ ಎಐಸಿಸಿ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಬೆಳಗಾವಿ ಯಮಕನಮರಡಿ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿ, , ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದ ಸತೀಶ್ ಜಾರಕಿಹೊಳಿ ಇ-ಮೇಲ್ ಮೂಲಕ ರಾಜೀನಾಮೆ ಪತ್ರವನ್ನು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಗೆ ರವಾನಿಸಿದ್ದಾರೆ.