ಬೆಂಗಳೂರು: ಕೇಂದ್ರ ಸಚಿವ ಡಿ.ವಿ.ಸದಾನಂದಗೌಡರಿಗೆ ಕೊರೋನಾ ಸೋಂಕು ತಗುಲಿದೆ. ಈ ಬಗ್ಗೆ ಸ್ವತಃ ಸದಾನಂದ ಗೌಡರೇ ಟ್ವಿಟ್ಟರ್​ನಲ್ಲಿ ಮಾಹಿತಿ ನೀಡಿದ್ದಾರೆ.

ಕೋವಿಡ್​ ಲಕ್ಷಣ ಕಂಡುಬಂದ ಹಿನ್ನೆಲೆಯಲ್ಲಿ ಕೊರೋನಾ ಪರೀಕ್ಷೆಗೆ ಒಳಪಟ್ಟಿದ್ದೆ. ವರದಿಯಲ್ಲಿ ಸೋಂಕು ಇರುವುದು ದೃಢಪಟ್ಟಿದೆ. ಹಾಗಾಗಿ ಐಸೋಲೇಶನ್​ಗೆ ಒಳಪಟ್ಟಿದ್ದೇನೆ.

ಹಾಗಾಗಿ ನನ್ನ ಪ್ರಾಥಮಿಕ ಸಂಪರ್ಕಕ್ಕೆ ಬಂದವರು ತಮ್ಮ ಆರೋಗ್ಯ ಬಗ್ಗೆ ಜಾಗ್ರತೆ ವಹಿಸಿಕೊಳ್ಳಿ. ಕೆಲ ದಿನ ಮನೆಯಲ್ಲಿದ್ದು, ಆರೋಗ್ಯ ಕಾಪಾಡಿಕೊಳ್ಳಿ ಎಂದು ಮನವಿ ಮಾಡಿದ್ದಾರೆ.