ಸದಾಶಿವ ಆಯೋಗದ ಬಗ್ಗೆ ಆಂಜನೇಯ ಬಿಟ್ಟರೆ ಯಾರು ಹೇಳಿಕೆ ನೀಡಬಾರದು: ಸಿದ್ದರಾಮಯ್ಯ ತಾಕಿತ್ತು,!
ಬೆಂಗಳೂರು:ಸದಾಶಿವ ಆಯೋಗದ ಬಗ್ಗೆ ಯಾರಂದ್ರೆ ಅವರು ಮಾತನಾಡಬಾರದು ಸಚಿವ ಹೆಚ್.ಆಂಜನೇಯ ಬಿಟ್ಟು ಬೇರೆ ಮುಖಂಡರು ಮಾಧ್ಯಮ ಹೇಳಿಕೆ ನೀಡದಂತೆ ತಾಕೀತು ಮಾಡಿದ್ದಾರೆ ಮುಖ್ಯ ಮಂತ್ರಿ ಸಿದ್ದರಾಮಯ್ಯರು.

ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿ ಜಾರಿ ಸಂಬಂಧ ಸಾಧಕ-ಬಾಧಕಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿಂದು ಪರಿಶಿಷ್ಟ ಜಾತಿ ಜನಪ್ರತಿನಿಧಿಗಳೊಂದಿಗೆ ಇಂದು ಮಹತ್ವದ ಸಭೆ ನಡೆಸಿದ ಸಂದರ್ಭದಲ್ಲಿ ಮಾತನಾಡಿದ ಅವರು ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿ ಜಾರಿ ಸಂಬಂಧ ಕಾನೂನು ಸಲಹೆ ಪಡೆಯಲು ಮುಂದಾಗಿದ್ದೇವೆ. ಹಾಗಾಗಿ ಯಾರು ಹೇಳಿಕೆಯನ್ನು ನೀಡಬಾರದು ಎಂದು ಹೇಳಿದ್ದಾರೆ.

ಕಳೆದ ಮೂರು ದಶಕಗಳ ಈ ಸಮಸ್ಯೆ ಬಗೆಹರಿಸುವ ಸಂಬಂಧ ಎಲ್ಲಾ ದಲಿತ ಜನಪ್ರತಿನಿಧಿಗಳೊಂದಿಗೆ ಮುಖ್ಯಮಂತ್ರಿಗಳು ಸುದೀರ್ಘ ಚರ್ಚೆ ನಡೆಸಿದರು. ಈ ಸಮಸ್ಯೆ ಪರಿಹಾರಕ್ಕೆ ಉನ್ನತ ಮಟ್ಟದ ಸಮಿತಿಯೊಂದನ್ನು ರಚಿಸುವ ಸಾಧ್ಯ-ಸಾಧ್ಯತೆ ಬಗ್ಗೆಯೂ ಕೂಡ ಚರ್ಚೆ ನಡೆದಿದೆ.

ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಸಚಿವರಾದ ಎಚ್.ಸಿ.ಮಹದೇವಪ್ಪ, ಎಚ್.ಆಂಜನೇಯ, ಪ್ರಿಯಾಂಕ್ ಖರ್ಗೆ, ಸಭೆಯಲ್ಲಿ ಹಾಜರಿದ್ದರು.