ದಾವಣಗೆರೆ : ಆರ್ಥಿಕ ಸದೃಢ ಕುಟುಂಬಗಳು ಸ್ವಯಂ ಪ್ರೇರಿತರಾಗಿ ವಾಪಸ್ ನೀಡದಿದ್ದರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಎಚ್ಚರಿಕೆ ನೀಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರ ಬಡತನ ರೇಖೆಗಿಂತ ಕೆಳಗಿರುವ ಬಡವರಿಗೆ ವಿತರಿಸುವ ಬಿಪಿಎಲ್ ಪಡಿತರ ಕಾರ್ಡ್ ಅನ್ನು ಕೆಲ ಸರ್ಕಾರಿ, ಸರ್ಕಾರದ ನಿಗಮ, ಮಂಡಳಿ, ಪ್ರಾಧಿಕಾರ, ವಿಶ್ವವಿದ್ಯಾಲಯ, ಸಂಸ್ಥೆಯ ಅಧಿಕಾರಿ, ನೌಕರರು ಮತ್ತು ಅವರ ಅವಲಂಬಿತ ಸೇವೆಗಳನ್ನು ಪಡೆದುಕೊಳ್ಳುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ ಎಂದು ತಿಳಿಸಿದ್ದಾರೆ.

ಅನರ್ಹರರು ಬಿಪಿಎಲ್ ಪಡಿತರ ಚೀಟಿಯನ್ನು ಹೊಂದಿರುವ ಮಾಹಿತಿ, ದೂರು ಬಂದರೆ ಅಂತಹವರ ವಿರುದ್ಧ ಶಿಸ್ತು ಕ್ರಮ ಮತ್ತು ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು. ಅವರಿಂದ ಸರ್ಕಾರಕ್ಕೆ ಉಂಟಾಗಿರುವ ನಷ್ಟವನ್ನು ವಸೂಲು ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.