ಬೆಂಗಳೂರು : ಸದ್ಯಕ್ಕೆ ಶಾಲೆ ಅರಂಭ ಮಾಡಲ್ಲ. ಆಗಸ್ಟ್ 15 ರ ಬಳಿಕ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

ಶಾಲೆ ಆರಂಭದ ಕುರಿತು ಪ್ರತಿ ಶಾಲೆಯ ಪೋಷಕರ ಅಭಿಪ್ರಾಯ ಸಂಗ್ರಹಿಸಲಾಗಿತ್ತು, ಪ್ರಾಥಮಿಕ ಶಾಲೆಗಳನ್ನು ಆರಂಭಿಸುವುದು ಬೇಡ ಎಂದು ಪೋಷಕರು ಮನವಿ ಮಾಡಿದ್ದಾರೆ. ಹೀಗಾಗಿ ಸದ್ಯಕ್ಕೆ ಶಾಲೆ ಆರಂಭ ಮಾಡೋಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದರು.

ಇನ್ನೂ, ಖಾಸಗಿ ಶಾಲೆಗಳಲ್ಲಿ ಶಿಕ್ಷಕರನ್ನು ತೆಗೆಯುವುದು ನನ್ನ ಗಮನಕ್ಕೆ ಬಂದಿದೆ. ಮಾನವೀಯತೆಯಿಂದ ಯಾರೂ ಕೆಲಸದಿಂದ ತೆಗೆಯಬಾರದು, ಪ್ರಧಾನಿ ಮೋದಿ ಅವರೇ ಮನವಿ ಮಾಡಿಕೊಂಡಿದ್ದಾರೆ  ಎಂದು ಹೇಳಿದರು.