ಬೆಂಗಳೂರು: ಲಾಕ್‌ಡೌನ್‌ ಎಫೆಕ್ಟ್‌ನಿಂದಾಗಿ ಸರ್ಕಾರದಿಂದ ರಾಜ್ಯಾದ್ಯಂತ ನಡೆಯಬೇಕಿದ್ದ ಸಪ್ತಪದಿ ಸಾಮೂಹಿಕ ವಿವಾಹ ಕಾರ್ಯಕ್ರಮ ಮುಂದೂಡಲಾಗಿತ್ತು. ಇದೀಗ ಮತ್ತೆ ಸಪ್ತಪದಿ ಸಾಮೂಹಿಕ ವಿವಾಹಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಜುಲೈ.23, 26, 29, 29 ಹಾಗೂ ಆ.10, 14ರಂದು ಮದುವೆ ಆಯೋಜಿಸಿರುವುದಾಗಿ ಸರ್ಕಾರ ಆದೇಶ ಹೊರಡಿಸಿದೆ. ಮುಜರಾಯಿ ಇಲಾಖೆಯಿಂದ ಸಾಮೂಹಿಕ ವಿವಾಹದಲ್ಲಿ ಪಾಲ್ಗೊಳ್ಳುವ ವಧುವಿಗೆ 8 ಗ್ರಾಂ ಚಿನ್ನದ ಮಾಂಗಲ್ಯ ಸೇರಿ ವಿವಾಹಕ್ಕೆ ಅಗತ್ಯ ವಸ್ತುಗಳನ್ನು ಖರೀದಿಸಲೆಂದು 55,000 ಹಣ ನೀಡಲಾಗುತ್ತಿದೆ.