ಬೆಂಗಳೂರು : ಸಂಕಷ್ಟದಲ್ಲಿ ಸಿಲುಕಿರುವ ಆಟೋ ಮತ್ತು ಟ್ಯಾಕ್ಸಿ ಚಾಲಕರಿಗೆ ಸರ್ಕಾರ ಭರ್ಜರಿ ಸಿಹಿ ಸುದ್ದಿ ನೀಡಿದ್ದು, ಆಟೋ ಮತ್ತು ಟ್ಯಾಕ್ಸಿ ಚಾಲಕರಿಗೆ ರಾಜ್ಯ ಸರ್ಕಾರ ಹೆಚ್ಚುವರಿಯಾಗಿ 40 ಕೋಟಿ ಹಣ ಬಿಡುಗಡೆ ಮಾಡಿದೆ.

ಆಟೋ ಮತ್ತು ಟ್ಯಾಕ್ಸಿ ಚಾಲಕರಿಗೆ ಒಂದು ಬಾರಿ ಪರಿಹಾರವಾಗಿ ತಲಾ 5000 ರೂ ನೀಡಲಾಗುವುದು, ಒಂದು ವೇಳೆ ಹೆಚ್ಚುವರಿ ಅನುದಾನದ ಅಗತ್ಯವಿದ್ದರೆ ಸಾದಿಲ್ವಾರು ನಿಧಿಯಿಂದ ಅಥವಾ ಪೂರಕ ಅಂದಾಜು-1 ರ ಮೂಲಕ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಸರ್ಕಾರ ಮಾಹಿತಿ ನೀಡಿದೆ. ಲಾಕ್ ಡೌನ್ ನಿಂದ ಸಂಕಷ್ಟದಲ್ಲಿರುವ ಆಟೋ ಮತ್ತು ಟ್ಯಾಕ್ಸಿ ಚಾಲಕರಿಗೆ ರಾಜ್ಯ ಸರ್ಕಾರ ಇತ್ತೀಚೆಗೆ ತಲಾ 5 ಸಾವಿರ ರೂ ಘೋಷಿಸಿ ಆದೇಶ ಹೊರಡಿಸಿತ್ತು.