ಬೆಂಗಳೂರು: ಕೃಷಿ , ತೋಟಗಾರಿಕೆ, ಲೋಕೋಪಯೋಗಿ ಹಾಗೂ ಪಶುಸಂಗೋಪನೆ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದೆಂದು ಮುಖ್ಯಮಂತ್ರಿಗಳು ಸಭೆಯಲ್ಲಿ ಹೇಳಿದರು.

ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಸಂಬಂಧ ವಿವರವಾದ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಿದ ನಂತರ, ಖಾಲಿ ಇರುವ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡುವ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು ಎಂದರು.

.ಸಭೆಯಲ್ಲಿ ಲೋಕೋಪಯೋಗಿ ಸಚಿವ ಹೆಚ್.ಡಿ.ರೇವಣ್ಣ, ತೋಟಗಾರಿಕೆ ಸಚಿವ ಮನಗೂಳಿ ಮಲ್ಲಪ್ಪ ಚನ್ನವೀರಪ್ಪ , ಪಶು ಸಂಗೋಪನೆ ಮತ್ತು ಮೀನುಗಾರಿಕೆ ಸಚಿವ ವೆಂಕಟರಾವ್ ನಾಡಗೌಡ , ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ|| ಟಿ.ಎಂ.ವಿಜಯಭಾಸ್ಕರ್ ಸೇರಿದಂತೆ ಉನ್ನತ ಅಧಿಕಾರಿಗಳು ಭಾಗವಹಿಸಿದ್ದರು.