ಬೆಂಗಳೂರು: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಹುದ್ದೆಗಳಿಗೆ ನೇಮಕಗೊಂಡು ನೇಮಕಾತಿ ಪತ್ರದ ನಿರೀಕ್ಷೆಯಲ್ಲಿದ್ದವರಿಗೆ ಹಣಕಾಸು ಇಲಾಖೆ ಶಾಕ್ ನೀಡಿದೆ.

ಹೊಸ ನೇಮಕಾತಿ ಆದೇಶ ನೀಡುವುದಕ್ಕೆ ಬ್ರೇಕ್ ಹಾಕಲಾಗಿದ್ದು, ಈ ಕುರಿತಂತೆ ಎಲ್ಲಾ ಇಲಾಖೆಗಳಿಗೆ ಈಗಾಗಲೇ ಪತ್ರ ಬರೆಯಲಾಗಿದೆ. ಹೀಗಾಗಿ ಮುಂದಿನ ಆದೇಶ ನೀಡುವವರೆಗೆ ಯಾವುದೇ ಹೊಸ ಪ್ರಕ್ರಿಯೆ ನಡೆಸುವಂತಿಲ್ಲ ಹಾಗೂ ಈಗಾಗಲೇ ಪೂರ್ಣಗೊಂಡಿರುವ ಆಯ್ಕೆ ಪ್ರಕ್ರಿಯೆಗೆ ನೇಮಕದ ಆದೇಶ ನೀಡುವಂತಿಲ್ಲ ಎಂದು ಹೇಳಿದೆ.