ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ನೆರೆಪರಿಸ್ಥಿತಿಯಿಂದ,  ಸೂರು ಕಳೆದುಕೊಂಡು ನಿರಾಶ್ರಿತರಾದವರಿಗೆ ನೆರವಿನ ಅಗತ್ಯವಿದ್ದು, ಹಲವಾರು ಸಂಘ ಸಂಸ್ಥೆಗಳು ನೆರೆಪರಿಹಾರಕ್ಕೆ ನೆರವಿನ ಹಸ್ತ ಚಾಚಿದ್ದಾರೆ.

ಹಾಗಾಗಿ  ರಾಜ್ಯ ಸರ್ಕಾರಿ ನೌಕರರು ತಮ್ಮ ಒಂದು ದಿನದ ವೇತನವನ್ನು ಪ್ರಕೃತಿ ವಿಕೋಪ ಸಂತ್ರಸ್ತರ ನೆರವಿಗಾಗಿ ನೀಡಲು ನಿರ್ಧರಿಸಿದ್ದಾರೆ.!

ಪ್ರವಾಹ ಪೀಡಿತ ಗ್ರಾಮಗಳಲ್ಲಿ ನಿರಾಶ್ರಿತರು ತಮ್ಮ ಬದುಕು ಕಟ್ಟಿಕೊಳ್ಳಲು ಶ್ರಮಿಸುತ್ತಿದ್ದಾರೆ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಈ ನಿಟ್ಟಿನಲ್ಲಿ ನೆರವು ನೀಡಲು ನಿರ್ಧರಿಸಿ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಿದೆ. ರಾಜ್ಯದ್ಯಂತ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲ ಇಲಾಖೆಗಳ ಹಾಗೂ ಎಲ್ಲ ವೃಂದದ ರಾಜ್ಯ ಸರ್ಕಾರಿ ನೌಕರರು, ನಿಗಮ-ಮಂಡಳಿ, ಸರ್ಕಾರದ ಅನುದಾನಿತ ಶಿಕ್ಷಣ ಸಂಸ್ಥೆ, ಪ್ರಾಧಿಕಾರಗಳು, ವಿಶ್ವವಿದ್ಯಾಲಯದ ಅಧಿಕಾರಿ, ನೌಕರರ ಒಂದು ದಿನದ ವೇತನವನ್ನು ಪ್ರತ್ಯೇಕ ಲೆಕ್ಕ ಶೀರ್ಷಿಕೆಯಡಿ ಕಟಾವು ಮಾಡಿ ಪ್ರಕೃತಿ ವಿಕೋಪ ಸಂತ್ರಸ್ತರ ಪುನರ್ ವಸತಿ ಉದ್ದೇಶಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಲಾಗುತ್ತದೆ.