ಬೆಂಗಳೂರು: ಲಾಕ್ ಡೌನ್ ಸಡಿಲಿಕೆ ಮಾಡಿರುವ ಹಿನ್ನೆಲೆಯಲ್ಲಿ ಎಲ್ಲ ಸರ್ಕಾರಿ ನೌಕರರು ಮೇ 19 ರಿಂದ ಕರ್ತವ್ಯಕ್ಕೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ.

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಸುತ್ತೋಲೆ ಹೊರಡಿಸಿದ್ದು, ಎಲ್ಲ ಸರ್ಕಾರಿ, ಅರೆ ಸರ್ಕಾರಿ, ಸ್ವಾಯತ್ತ ಸಂಸ್ಥೆ, ನಿಗಮ-ಮಂಡಳಿಗಳಲ್ಲಿ ಶೇಕಡ 100 ರಷ್ಟು ಸಿಬ್ಬಂದಿ ಹಾಜರಾತಿ ಇರಬೇಕು ಎಂದು ತಿಳಿಸಿದ್ದಾರೆ.