ಬೆಂಗಳೂರು : ಇನ್ಮುಂದೆ ಸಿಎಂ ಅನುಮತಿ ಇಲ್ಲದೆ ಸರ್ಕಾರಿ ನೌಕರರನ್ನು ವರ್ಗಾವಣೆ ಮಾಡುವಂತಿಲ್ಲ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಸುತ್ತೋಲೆ ಹೊರಡಿಸಿದ್ದಾರೆ.

ಸರ್ಕಾರಿ ನೌಕರರನ್ನು ತಮಗೆ ಇಷ್ಟ ಬಂದ ಕಡೆ ವರ್ಗಾವಣೆ ಮಾಡುತ್ತಿದ್ದ ಸಚಿವರಿಗೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಬ್ರೇಕ್ ಹಾಕಿದ್ದು, ಇನ್ಮುಂದೆ ಸರ್ಕಾರಿ ಅಧಿಕಾರಿಗಳ ವರ್ಗಾವಣೆಗೆ ಸಿಎಂ ಅನುಮತಿ ಕಡ್ಡಾಯ ಎಂದು ಸುತ್ತೋಲೆ ಹೊರಡಿಸಿದ್ದಾರೆ.