ಬೆಂಗಳೂರು; ಸಾರಿಗೆ ಇಲಾಖೆಗೆ ನಷ್ಟವಾಗಿದ್ದರೂ ಸದ್ಯಕ್ಕೆ ಬಸ್ ಟಿಕೆಟ್ ದರ ಹೆಚ್ಚಳ ಮಾಡುವುದಿಲ್ಲ ಎಂದು ಸಾರಿಗೆ ಸಚಿವರೂ ಆಗಿರುವ ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ಸಾರಿಗೆ ಇಲಾಖೆ ಪರಿಶೀಲನಾ ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಾಕ್ ಡೌನ್ ಬಿಕ್ಕಟ್ಟಿನಿಂದ ಸಾರಿಗೆ ಇಲಾಖೆಗೆ ನಷ್ಟವಾಗಿದ್ದರೂ ಬಸ್ ಟಿಕೆಟ್ ದರವನ್ನು ಸದ್ಯಕ್ಕೆ ಹೆಚ್ಚಳ ಮಾಡುವುದಿಲ್ಲ. ಈ ಕುರಿತ ಪ್ರಸ್ತಾವನೆ ಕೂಡ ಸರ್ಕಾರದ ಮುಂದೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.!