ಬೆಂಗಳೂರು : ಆಶಾ ಕಾರ್ಯಕರ್ತೆಯರಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ಆಶಾ ಕಾರ್ಯಕರ್ತೆಯರ ವೇತನ ಹೆಚ್ಚಳ ಮಾಡಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಆಶಾ ಕಾರ್ಯಕರ್ತೆಯರ ಸಂಬಳ ಹೆಚ್ಚಳ ಮಾಡಲಾಗುವುದು. ಆದರೆ ಎಷ್ಟು ಸಂಬಳ ಹೆಚ್ಚಳ ಮಾಡಬೇಕು ಎಂಬುದನ್ನು ಸರ್ಕಾರದ ಆರ್ಥಿಕ ಪರಿಸ್ಥಿತಿ ನೋಡಿಕೊಂಡು ಮುಖ್ಯಮಂತ್ರಿ ಅವರು ನಿರ್ಧಾರ ಕೈಗೊಳ್ಳಲಿದ್ದಾರೆ. 2-3 ದಿನಗಳಲ್ಲಿ ಆದೇಶ ಹೊರಬೀಳಲಿದೆ ಎಂದು ಹೇಳಿದರು.