ಬೆಂಗಳೂರು: ಕೊರೋನಾ ಸಂಬಂಧ ಚರ್ಚಿಸಲು ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಬಳಿ ಸಮಯ ಕೇಳಿದ್ದೇವೆ. ಸರ್ವಪಕ್ಷ ನಿಯೋಗ ತೆರಳಿ ಅವರಿಗೆ ಕೆಲ ಸಲಹೆಗಳನ್ನು ನೀಡಲಿದ್ದೇವೆ ೆಂದು ವಿಪಕ್ಷ ನಾಯಕ ಸಿದ್ಧರಾಮಯ್ಯ ಹೇಳಿದ್ದಾರೆ.

ಸರಕಾರ  ಸ್ಪಂದಿಸದಿದ್ದಲ್ಲಿ ಹೋರಾಟ ಅನಿವಾರ್ಯ ಎಂದಿದ್ದಾರೆ. ತಮ್ಮ ಊರುಗಳಿಗೆ ತೆರಳಿರುವ ಕಾರ್ಮಿಕರಿಗೆ ಮನ್ರೇಗಾ ಯೋಜನೆ ಅಡಿ ಉದ್ಯೋಗ ನೀಡಬೇಕಿತ್ತು. ಆದರೆ ಅವರಿಗೆ ಈವರೆಗೆ ಜಾಬ್ ಕಾರ್ಡ್ ನೀಡಿಲ್ಲ. ಹಾಗಾಗಿ ಅವರಿಗೆ ಸರ್ಕಾರ 45 ದಿನಗಳ ಭತ್ಯೆ ನೀಡಬೇಕೆಂದು ಒತ್ತಾಯಿಸಿದರು.