ಚಿತ್ರದುರ್ಗ: ಎರಡು ಕಾರು ಹಾಗು ಲಾರಿ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಹಳೇಹಳ್ಳಿ ಗೇಟ್ ಸಮೀಪ ನಡೆದಿದೆ.

ಮೃತ ಶಂಭು (60) ಎಂದು ಗುರುತಿಸಲಾಗಿದೆ. ತರಿಕೆರೆ ತಾಲ್ಲೂಕಿನ ಲಕ್ಕವಳ್ಳಿಯಿಂದ ಹೊಳಲ್ಕೆರೆ ತಾಲ್ಲೂಕಿನ ಕೊಂಡಾಪುರ ಗ್ರಾಮಕ್ಕೆ ಕನ್ಯೆ ನೋಡಲು ಎರಡು ಕಾರುಗಳಲ್ಲಿ ಬರುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಚಿತ್ರದುರ್ಗ ಕಡೆಯಿಂದ ವೇಗವಾಗಿ ಬಂದ ಲಾರಿ, ಚಾಲಕನ ನಿಯಂತ್ರಣ ತಪ್ಪಿ ಎರಡೂ ಕಾರುಗಳಿಗೆ ಡಿಕ್ಕಿ ಹೊಡೆದಿದ್ದು, ಕಾರುಗಳು ಸಂಪೂರ್ಣ ನಜ್ಜುಗುಜ್ಜಾಗಿವೆ. ಘಟನೆಯಲ್ಲಿ ಕಾರಿನಲ್ಲಿದ್ದವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಚಿತ್ರಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.