ಬೆಂಗಳೂರು: ಸರಕಾರಿ ನೌಕರರು ಬಿಪಿಎಲ್ ಕಾರ್ಡ್ ಹೊಂದಿದ್ದರೆ, ಟ್ರಾಕ್ಟರ್ ಅಥವಾ ಇತರೆ ವಾಹನ ಹೊಂದಿರುವವರು ತಮ್ಮ ಬಿಪಿಎಲ್  ಕಾರ್ಡ್‌ಗಳನ್ನು ಕೂಡಲೇ ಹಿಂತಿರುಗಿಸಿ, ರದ್ದುಪಡಿಸಿಕೊಳ್ಳಬೇಕು. ಇಲ್ಲವಾದಲ್ಲಿ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳುವಂತೆ ಸಿಎಂ ಬಿ.ಎಸ್.ಯಡಿಯೂರಪ್ಪ ಸೂಚಿಸಿದ್ದಾರೆ.

ಅರ್ಹ ಫಲಾನುಭವಿಗಳಿಗೆ ಪಡಿತರ ಸೌಲಭ್ಯ ಸಮರ್ಪಕವಾಗಿ ತಲುಪಬೇಕು. ಜೊತೆಗೆ ಅನರ್ಹರು ಈ ಸೌಲಭ್ಯ ದುರುಪಯೋಗಪಡಿಸಿಕೊಳ್ಳದಂತೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ.