ಬೆಳಗಾವಿ: ಸರ್ಕಾರ ನಡೆಸುವುದು ಸುಲಭದ ಮಾತಲ್ಲ, ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಪವರ್‍ಫುಲ್ ಇದ್ದಾರೆ, ಯಂಗ್‍ಸ್ಟಾರ್ ಇದ್ದಾರೆ. ಸರ್ಕಾರವನ್ನು ಸಮರ್ಥವಾಗಿ ಮುನ್ನಡೆಸಿಕೊಂಡು ಹೋಗುತ್ತಾರೆ  ಎಂದು ಐಟಿ ಬಿಟಿ ಸಚಿವ ಕೆ.ಜೆ.ಜಾರ್ಜ್  ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ನಡೆಸುವುದು, ಅದೊಂದು ಮುಳ್ಳಿನ ಹಾಸಿಗೆ ಇದ್ದಂತೆ. ಸಿಎಂ ಹುದ್ದೆ ಎಂಜಾಯ್ ಮಾಡುವ ಪೋಸ್ಟ್ ಅಲ್ಲ ಆದ್ರೆ ಎಲ್ಲವನ್ನು ನಿಭಾಯಿಸುವ ಶಕ್ತಿ ಮುಖ್ಯ ಮಂತ್ರಿಗಳಿಗಿದೆ ಎಂದರು

ಸಿಎಂ ಅವರು ಅವರ ಪಕ್ಷದ ಕಚೇರಿಯ ಕಾರ್ಯಕ್ರಮದಲ್ಲಿ ಉತ್ತಮ ಕೆಲಸ ಮಾಡಿದರೂ ರಾಜ್ಯದ ಜನರಿಂದ ಬೆಂಬಲ ಸಿಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿ ಕಣ್ಣೀರು ಹಾಕಿದರು. ಇದನ್ನು ಮಾಧ್ಯಮದವರು ನಕಾರಾತ್ಮಕವಾಗಿ ಬಿಂಬಿಸಿದ್ದಾರೆ, ಅದು ಸರಿಯಲ್ಲಾ ಎಂದರು.