ಬೆಳಗಾವಿ: ಬೆಳಗಾವಿ ಜಿಲ್ಲಾಧಿಕಾರಿ ನಿವಾಸದಲ್ಲಿ ಕರ್ತವ್ಯ ನಿರತ ಪೋಲಿಸ್ ಪೇದೆ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಿಗ್ಗೆ ನಡೆದಿದೆ.

ನಗರ ಮೀಸಲು ಸಶಸ್ತ್ರ ಪೊಲೀಸ್ ಪೇದೆ ಕಿತ್ತೂರ ತಾಲೂಕಿನ ಅಂಬಡಗಟ್ಟಿಯ ಪ್ರಕಾಶ್(30) ಮೃತಪಟ್ಟ ಪೊಲೀಸ್ ಪೇದೆಯಾಗಿದ್ದಾರೆ. ವಿಶ್ವೇಶ್ವರಯ್ಯ ನಗರದಲ್ಲಿರುವ ಬೆಳಗಾವಿ ಜಿಲ್ಲಾಧಿಕಾರಿ ಎಸ್‌ಬಿ ಬೊಮ್ಮನಹಳ್ಳಿ ನಿವಾಸದಲ್ಲಿ ಈ ಘಟನೆ ನಡೆದಿದೆ. ಕರ್ತವ್ಯದ ವೇಳೆ ಸೆಕ್ಯೂರಿಟಿ ರೂಮ್ ನಲ್ಲಿ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.