ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ 16 ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಅರ್ಜಿ ಸಲ್ಲಿಸಲು ಇಚ್ಛಿಸುವವರು ಅರಣ್ಯಶಾಸ್ತ್ರದಲ್ಲಿ ಪದವಿ ಪಡೆದಿರಬೇಕು. ಅರ್ಧದಷು ಹುದ್ದೆಗಳು ಇತರೆ ವಿಜ್ಞಾನ ಪದವಿ ಪಡೆದವರಿಗೆ ಮೀಸಲಿರಿಸಲಾಗಿದೆ. ಅ.20ರಿಂದ ನ.20ರವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದ್ದು, ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್ ಸೈಟ್ ಭೇಟಿ ನೀಡಿ.