ಬೆಂಗಳೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ 1242 ಸಹಾಯಕ ಪ್ರಾಧ್ಯಾಪಕರು ಮತ್ತು 310 ಪ್ರಾಂಶುಪಾಲರ ಹುದ್ದೆಗಳ ನೇಮಕಾತಿಗೆ ಸರ್ಕಾರ ತಡೆ ನೀಡಿದೆ.

ಏಕೆಂದ್ರೆಕೊರೋನಾ ಕಾರಣದಿಂದ ಹೊಸ ಹುದ್ದೆಗಳ ಮಂಜೂರಾತಿ, ನೇಮಕಾತಿಗೆ ಆರ್ಥಿಕ ಇಲಾಖೆ ಒಪ್ಪಿಲ್ಲವೆನ್ನಲಾಗಿದೆ. ಆರ್ಥಿಕ ಸಂಪನ್ಮೂಲ ಸಂಗ್ರಹ ಕುಂಠಿತವಾಗಿರುವುದರಿಂದ ಹೊಸ ನೇಮಕಾತಿ ತಡೆಹಿಡಿಯುವಂತೆ ಆರ್ಥಿಕ ಇಲಾಖೆ ಸೂಚಿಸಿದೆ.