ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ಎಸ್‌‌ಎಸ್‌‌ಎಲ್‌ಸಿಯ ಇಂಗ್ಲಿಷ್ ಪ್ರಶ್ನೆಪತ್ರಿಕೆ ನಕಲಿ ಎಂದು ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಕಲಿ ಪ್ರಶ್ನೆಪತ್ರಿಕೆ ಹರಿಬಿಟ್ಟವರ ವಿರುದ್ಧ ಸೈಬರ್ ಪೊಲೀಸರಿಗೆ ದೂರು ನೀಡಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ವಿದ್ಯಾರ್ಥಿಗಳು & ಪೋಷಕರು ಇಂತಹ ಸುದ್ದಿಗಳಿಗೆ ಕಿವಿ ಕೊಡಬಾರದು. ಮಾಧ್ಯಮಗಳು ಇಂತಹ ಸತ್ಯಕ್ಕೆ‌ ದೂರವಾದ ಸುದ್ದಿಗಳನ್ನು ಬಿತ್ತರಿಸಬಾರದು ಎಂದು ಮನವಿ ಮಾಡಿದರು.