ಮಂಡ್ಯ: ಕರ್ನಾಟಕ ಸಾರಿಗೆ ಇಲಾಖೆಗೆ ಹೊಸ 1200 ಬಸ್ ಗಳನ್ನು ಖರೀದಿ ಮಾಡಲಾಗುವುದು ಎಂದು ಸಾರಿಗೆ ಸಚಿವ ಡಿ.ಸಿ. ತಮ್ಮಣ್ಣ ಹೇಳಿದ್ದಾರೆ.

ಮಾಧ್ಯಮದವರೊಂದೊಗೆ ಮಾತನಾಡಿದ ಅವರು, ರಸ್ತೆಗಳ ಕಾರಣಕ್ಕೆ ಪದೇ ಪದೆ ಬಸ್ ಗಳು ರಿಪೇರಿಗೆ ಬರುತ್ತಿವೆ. ಲೋಕೋಪಯೋಗಿ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವರ ಜೊತೆ ರಸ್ತೆ ದುಸ್ಥಿತಿ ಸಂಬಂಧ ಚರ್ಚಿಸಲಾಗುವುದು ಎಂದು ಹೇಳಿದರು.

ಎಸ್ಸಿ-ಎಸ್ಟಿ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಲು ಈಗಾಗಲೇ ಸರ್ಕಾರ ಹಣ ನೀಡಿದೆ. ಹೀಗಾಗಿ ಅವರಿಗೆ ಉಚಿತ ಬಸ್ ಪಾಸ್ ಸಿಗಲಿದೆ. ಆದರೆ ಎಲ್ಲ ವಿದ್ಯಾರ್ಥಿಗಳಿಗೂ ಉಚಿತ ಪಾಸ್ ವಿತರಣೆಗೆ ಶಿಕ್ಷಣ ಇಲಾಖೆ ಆ ಬಾಬ್ತು ಪಾವತಿಸಬೇಕಾಗುತ್ತದೆ ಎಂದರು.