ಬೆಂಗಳೂರು: ಕೆಎಸ್ಆರ್ಟಿಸಿ, ಬಿಎಂಟಿಸಿ, ವಾಯವ್ಯ ಸಾರಿಗೆ ಮತ್ತು ಈಶಾನ್ಯ ಸಾರಿಗೆ ಸಂಸ್ಥೆಗಳ ಸಿಬ್ಬಂದಿಯ ವೇತನಕ್ಕಾಗಿ ₹961 ಕೋಟಿ ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ ಎಂದು ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ.
ಈಗಾಗಲೇ ಜೂನ್ ಮತ್ತು ಜುಲೈ ಸಂಬಳಕ್ಕಾಗಿ 426 ಕೋಟಿ ಬಿಡುಗಡೆ ಮಾಡಲಾಗಿದೆ. ಜೂನ್ ತಿಂಗಳಿಂದ ಸೆಪ್ಟೆಂಬರ್ ತನಕ 4 ತಿಂಗಳು ವೇತನ ಭರಿಸಲು ಸರ್ಕಾರದ ಈ ತೀರ್ಮಾನದಿಂದ ಅನುಕೂಲವಾದಂತಾಗಿದೆ ಎಂದು ಸಚಿವರು ಹೇಳಿದ್ದಾರೆ.
No comments!
There are no comments yet, but you can be first to comment this article.