ಬೆಂಗಳೂರು : ಸಾರ್ವಜನಿಕ ಆಸ್ತಿಪಾಸ್ತಿಗೆ ನಷ್ಟ ಉಂಟುಮಾಡಿದ್ರೇ, ನಷ್ಟ ಉಂಟು ಮಾಡಿದವರಿಂದಲೇ ವಸೂಲಿ ಮಾಡಬೇಕು ಎಂಬುದಾಗಿ ಸುಪ್ರೀಂ ಕೋರ್ಟ್ ಆದೇಶವಿದೆ. ಈ ಆದೇಶದಂತೆಯೇ ಡಿಜೆ ಹಳ್ಳಿ, ಕೆಜಿ ಹಳ್ಳಿ ಘಟನೆಯಲ್ಲಿ ಹಾನಿಯಾದ ನಷ್ಟವನ್ನು ಗಲಭೆಕೋರರಿಂದಲೇ ವಸೂಲಿ ಮಾಡಲು ನಿರ್ಧಾರ ಮಾಡಿರುವುದಾಗಿ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹಸಚಿವ ಬಸವರಾಜ್ ಬೊಮ್ಮಾಯಿ, ಕಳೆದ ನಿನ್ನೆ ನಡೆದಂತ ಕೆಜಿ ಹಳ್ಳಿ, ಡಿಜೆ ಹಳ್ಳಿ ಠಾಣಾ ವ್ಯಾಪ್ತಿಯಲ್ಲಿನ ಉದ್ವಿಗ್ನತೆ ಈಗಾಗಲೇ ನಿಯಂತ್ರಣಕ್ಕೆ ಬಂದಿದೆ. ಈ ಸಂಬಂಧ ನೂರಾರು ಜನರನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾರೆ. ಪ್ರಕರಣ ಕುರಿತಂತೆ ಘಟನೆಯಲ್ಲಿ ಭಾಗಿಯಾದವರ ಪತ್ತೆ ಕಾರ್ಯ ನಡೆದಿದೆ ಎಂದು ಹೇಳಿದ್ರು.