ನವದೆಹಲಿ: ಸಾಮಾಜಿಕ ಅಂತರದ ನಿಯಮ ಪಾಲಿಸುವ ಸಲುವಾಗಿ ವಿವಾಹ ಸಮಾರಂಭಗಳಲ್ಲಿ 50ಕ್ಕಿಂತ ಹೆಚ್ಚಿನ ಜನ ಸೇರುವಂತಿಲ್ಲ ಹಾಗೂ ಅಂತ್ಯಕ್ರಿಯೆಯಲ್ಲಿ 20ಕ್ಕಿಂತ ಹೆಚ್ಚಿನ ಜನ ಭಾಗವಹಿಸುವಂತಿಲ್ಲ ಎಂದು ಕೇಂದ್ರ ಗೃಹ ಸಚಿವಾಲಯದ ಜಂಟಿ ಕಾರ್ಯದರ್ಶಿ ಪುಣ್ಯ ಶ್ರೀವಾಸ್ತವ ಹೇಳಿದ್ದಾರೆ.

ಜೊತೆಗೆ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್‌ ಧರಿಸುವುದು ಹಾಗೂ ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಬಹು ಮುಖ್ಯ ಎಂದು ಹೇಳಿದ್ದಾರೆ.