ಬೆಂಗಳೂರು: ಕಾಸ್ಕಾರ್ಡ್ ಬ್ಯಾಂಕ್ ಗಳಲ್ಲಿನ ರೈತರ ಸುಸ್ತಿ ಸಾಲ ಮಾಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಈ ಸಂಬಂಧ ಸಿಎಂಗೆ ಪ್ರಸ್ತಾವನೆ ಸಲ್ಲಿಸಲು ಸಹಕಾರ ಸಂಘಗಳ ನಿಬಂಧಕರು ಸಿದ್ಧತೆ ನಡೆಸಿದ್ದು, ಬಜೆಟ್ ನಲ್ಲಿ ಮನ್ನಾ ಆಗುವ ಸಾಧ್ಯತೆ ಇದೆ.

ರಾಜ್ಯ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ಗಳಲ್ಲಿ ರೈತರು ಪಡೆದ ಸಾಲದ ಮೇಲಿನ ಸುಸ್ತಿಯನ್ನು ಒಂದು ಬಾರಿ ಮನ್ನಾ ಮಾಡುವ ಪ್ರಸ್ತಾವನೆಗೆ ಸಿದ್ಧತೆ ನಡೆದಿದೆ. ರಾಜ್ಯದ 177 ಕಾಸ್ಕಾರ್ಡ್ ಬ್ಯಾಂಕಿನಲ್ಲಿನ ಸುಸ್ತಿ ಸಾಲ ಮನ್ನಾ ಆಗುವ ನಿರೀಕ್ಷೆ ಇದೆಯಂತೆ.!