ಬೆಂಗಳೂರು: 2020ನೇ ಸಾಲಿನ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ಪರೀಕ್ಷಾ ದಿನಾಂಕ ನಿಗದಿಪಡಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ ನಾರಾಯಣ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಾಕ್ ಡೌನ್ ನಿಂದಾಗಿ ಸಿಇಟಿ ಪರೀಕ್ಷಾ ದಿನಾಂಕವನ್ನು ಮುಂದೂಡಲಾಗಿತ್ತು. ಇದೀಗ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಜುಲೈ 30, 31ಕ್ಕೆ ನಿಗದಿಪಡಿಸಲಾಗಿದೆ ಎಂದು ಹೇಳಿದ್ದಾರೆ.