ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬಹುಮುಖ್ಯ ಮಾಹಿತಿಯೊಂದನ್ನು ನೀಡಿದ್ದು, ವಿದ್ಯಾರ್ಥಿಗಳಿಗೆ ದಾಖಲಾತಿಗಳ ಪ್ರತಿ ಅಪ್ ಲೋಡ್ ಮಾಡಲು ಸೋಮವಾರದಿಂದ ಅವಕಾಶ ಕಲ್ಪಿಸಿದೆ.

ಇಂಜಿನಿಯರಿಂಗ್ ಸೇರಿ ವಿವಿಧ ವೃತ್ತಿಪರ ಕೋರ್ಸ್ ಗಳಲ್ಲಿ ರ್ಯಾಂಕ್ ಪಡೆದಿರುವ ವಿದ್ಯಾರ್ಥಿಗಳು ದಾಖಲೆಗಳನ್ನು ಸಲ್ಲಿಸುತ್ತಿದ್ದಾರೆ. ಸೆ. 7-8 ರಂದು ಮೊದಲ 2 ಸಾವಿರ ವರೆಗಿನ ರ್ಯಾಂಕ್ ವಿದ್ಯಾರ್ಥಿಗಳು ದಾಖಲೆ ಸಲ್ಲಿಸಲು ಅವಕಾಶ ಕಲ್ಪಿಸಿದೆ.

ಇನ್ನು ಆನ್ ಲೈನ್ ಮೂಲಕ ದಾಖಲೆ ಸಲ್ಲಿಸಲು ವಿದ್ಯಾರ್ಥಿಗಳಿಗೆ ಅವಕಾಶ ನೀಡಿರುವುದರಿಂದ ಸುಲಭವಾಗಿ ಪ್ರಕ್ರಿಯೆ ನಡೆಯುತ್ತಿದ್ದು, ವಿದ್ಯಾರ್ಥಿಗಳು ಸಹಾಯವಾಣಿ 08023564583 ಸಂಖ್ಯೆಗೆ ಕರೆ ಮಾಡಿ ಮಾಹಿತಿ ಪಡೆಯಬಹುದು ಎಂದು ಹೇಳಿದೆ.