ಬೆಂಗಳೂರು: ಸಿಇಟಿ ಪರೀಕ್ಷೆ ಮುಗಿದ ನಂತರವೇ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಮಾಡಲಾಗುವುದು ಎಂದು ಸಚಿವ ಎಸ್ ಸುರೇಶ್ ಕುಮಾರ್ ಹೇಳಿದ್ದಾರೆ.

ಇಷ್ಟು ವರ್ಷ ದ್ವಿತೀಯ ಪಿಯುಸಿ ರಿಸಲ್ಟ್ ಬಂದ ನಂತರವಷ್ಟೇ ಸಿಇಟಿ ಪರೀಕ್ಷೆಯನ್ನು ಘೋಷಣೆ ಮಾಡುತ್ತಿದ್ದರು.

ಈ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಕ್ಕೆ ಮೊಬೈಲ್‌ ತರುವುದನ್ನು ಬ್ಯಾನ್ ಮಾಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.