ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರವು 2020 ನೇ ಸಿಇಟಿ ಮೊದಲ ಸುತ್ತಿನ ಸೀಟು ಹಂಚಿಕೆ ವೇಳಾಪಟ್ಟಿ ಪ್ರಕಟಿಸಿದ್ದು, ಆಯ್ಕೆ ದಾಖಲಿಸಲು ನವೆಂಬರ್ 22 ರ ಮಧ್ಯಾಹ್ನ 2 ಗಂಟೆಯಿಂದ ನ. 25 ರ ಬೆಳಗ್ಗೆ 11 ಗಂಟೆಯವರೆಗೆ ಕಾಲಾವಕಾಶ ನೀಡಿದೆ.

ಪ್ರಸಕ್ತ ಸಾಲಿನ ಎಂಜಿನಿಯರಿಂಗ್ ಸೇರಿದಂತೆ ಮೊದಲಾದ ವೃತ್ತಿಪರ ಕೋರ್ಸ್ ಗಳ ಸೀಟ್ ಮ್ಯಾಟ್ರಿಕ್ಸ್ ಮತ್ತು ಶುಲ್ಕ ವಿವರವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿದೆ. ಅಣಕು ಸೀಟು ಹಂಚಿಕೆ ಫಲಿತಾಂಶ ನವೆಂಬರ್ 26 ರಂದು ಪ್ರಕಟವಾಗಲಿದೆ.

ನೈಜು ಸೀಟು ಹಂಚಿಕೆ ಫಲಿತಾಂಶ ನವೆಂಬರ್ 29 ರಂದು ಹೊರಬೀಳಲಿದೆ. ಅಭ್ಯರ್ಥಿಗಳು ಪಾಲಕ ಪೋಷಕರೊಂದಿಗೆ ಚರ್ಚಿಸಿ ಸೂಕ್ತ ಆಯ್ಕೆಗೆ ಡಿಸೆಂಬರ್ ವರೆಗೂ ಅವಕಾಶವಿದೆ. ಹೆಚ್ಚಿನ ಮಾಹಿತಿಗಾಗಿ ಪ್ರಾಧಿಕಾರದ ವೆಬ್ ಸೈಟ್ http://kea.kar.nic.in ಗೆ ಭೇಟಿ ನೀಡಬಹುದು.