ಬೆಂಗಳೂರು; ತಾಂತ್ರಿಕ ಕಾರಣಗಳಿಂದಾಗಿ‌ ಗುರುವಾರ ಪ್ರಕಟವಾಗಬೇಕಾಗಿದ್ದ ಸಿಇಟಿ ಫಲಿತಾಂಶವನ್ನು ಶುಕ್ರವಾರ (ಆಗಸ್ಟ್ 21ರಂದು) ಪ್ರಕಟಿಸಲಾಗುವುದು ಎಂದು ಡಿಸಿಎಂ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ), ಆಗಸ್ಟ್ 21ರಂದು ಮಧ್ಯಾಹ್ನ 12.30ಕ್ಕೆ ಫಲಿತಾಂಶವನ್ನು ವಿದ್ಯಾರ್ಥಿಗಳಿಗೆ ಲಭ್ಯವಾಗುವ ರೀತಿ ಮಾಡಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಈ ಕೆಳಗಿನ‌ ಲಿಂಕ್‌ನಲ್ಲಿ http://karresults.nic.in ಫಲಿತಾಂಶ ಲಭ್ಯವಾಗಲಿದೆ.