ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ವಿರುದ್ಧದ ಹೋರಾಟಕ್ಕೆ ಹಲವು ಸಂಘಸಂಸ್ಥೆಗಳು, ಕ್ರೀಡಾಪಟುಗಳು, ಸಿನಿಮಾ ನಟರು, ರಾಜಕೀಯ ಮುಖಂಡರು ಸಿಎಂ ಪರಿಹಾರ ನಿಧಿಗೆ ದೇಣಿಗೆ ನೀಡಿದ್ದಾರೆ. ಇದೀಗ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರು ಸಹ ತಮ್ಮ ಒಂದು ದಿನದ ಸಂಬಳವನ್ನು ನೀಡಲು ನಿರ್ಧರಿಸಿದ್ದಾರೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆ ಹಾಗೂ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನೌಕರರು ತಮ್ಮ ಒಂದು ದಿನದ ಸಂಬಳವನ್ನು ಸಿಎಂ ಪರಿಹಾರ ನಿಧಿಗೆ ನೀಡಲು ನಿರ್ಧರಿಸಿದ್ದಾರೆ.

ಇನ್ನು ರಾಜ್ಯದಲ್ಲಿ ಕೊರೊನಾ ವೈರಸ್ ಭೀತಿ ಹೆಚ್ಚಳವಾಗುತ್ತಿದ್ದು, ಇಂದು ಮತ್ತೆ 6 ಜನರಲ್ಲಿ ಸೋಂಕು ದೃಢವಾಗಿದ್ದು, ಸೋಂಕಿತರ ಸಂಖ್ಯೆ 181 ಕ್ಕೆ ಏರಿಕೆಯಾಗಿದೆ.