ತುಮಕೂರು:  ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಬಿಜೆಪಿ ಹೈಕಮಾಂಡ್ ನಿಂದ ಗ್ರೀನ್ ಸಿಗ್ನಲ್ ದೊರೆಯದಿರುವುದೇ ಮುಖ್ಯಮಂತ್ರಿ ಬದಲಾವಣೆಯ ಮುನ್ಸೂಚನೆಯಾಗಿದೆ ಎಂದು ಕಾಂಗ್ರೆಸ್ ಮಾಜಿ ಶಾಸಕ ಕೆ.ಎನ್. ರಾಜಣ್ಣ ಹೇಳಿದ್ದಾರೆ.

ಅವರು, ಬಿಜೆಪಿಗೆ ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಲ್ಲಿ ಮುಂದುವರೆಸುವುದಿದ್ದರೆ ಅವರು ನೀಡಿದ್ದ ಸಚಿವರ ಪಟ್ಟಿಯನ್ನು ಅನುಮೋದನೆ ದೊರೆಯುತ್ತಿತ್ತು, ಬಿಜೆಪಿಗೆ ಬಿಎಸ್ ವೈ ಬೇಕಾಗಿಲ್ಲ ಎಂಬುದು ಇದರಿಂದಲೇ ತಿಳಿಯುತ್ತದೆ ಹೇಳಿದ್ದಾರೆ.