ನವದೆಹಲಿ; ಸಿಡಿಲಿನಿಂದ ರಕ್ಷಣೆ ಪಡೆಯಲು ಕೇಂದ್ರ ಸರ್ಕಾರ ‘ಧಾಮಿನಿ’ ಎಂಬ ಆ್ಯಪ್ ಅಭಿವೃದ್ಧಿಪಡಿಸಿದೆ.

ಈ ಆ್ಯಪ್ ಅನ್ನು ಸ್ಮಾರ್ಟ್ ಫೋನ್ ಗಳಲ್ಲಿ ಡೌನ್ಲೋಡ್ ಮಾಡಿಕೊಂಡು ಹೆಸರು, ವಿಳಾಸ ಸೇರಿದಂತೆ ಸಂಪೂರ್ಣ ಮಾಹಿತಿ ನೀಡಿದರೆ ಅವರಿರುವ ಪ್ರದೇಶದಲ್ಲಿ ಸಿಡಿಲಿನ ಕುರಿತು ಈ ಆ್ಯಪ್ ಮುಂಚಿತವಾಗಿಯೇ ಮುನ್ಸೂಚನೆ ನೀಡುತ್ತದೆ. ಆಗ ತಕ್ಷಣವೇ ಸುರಕ್ಷಿತ ಸ್ಥಳಗಳಿಗೆ ತೆರಳಿ ಪ್ರಾಣಾಪಾಯದಿಂದ ಪಾರಾಗಬಹುದಾಗಿದೆ. ಹವಾಮಾನ ಮುನ್ಸೂಚನೆ ಕೇಂದ್ರದ ಮುಖ್ಯ ಕಚೇರಿ ಜತೆ ಆ್ಯಪ್ ಜೋಡಣೆಯಾಗಿದೆ.