ಬೆಂಗಳೂರು: ನಿಮಗೆ ತಾಕತ್ತಿದ್ದರೆ ಉಪಚುನಾವಣೆ ಎದುರಿಸಿ ಗೆದ್ದು ತೋರಿಸಿ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಅವರು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಸವಾಲು ಹಾಕಿದ್ದಾರೆ.

ಅನರ್ಹ ಶಾಸಕರ ರಾಜೀನಾಮೆಗೆ ಸಿದ್ದರಾಮಯ್ಯರೇ ಕಾರಣ. ಧರ್ಮಸ್ಥಳದ ಶಾಂತಿವನದಲ್ಲಿ ಮೈತ್ರಿ ಸರ್ಕಾರ ಪತನಗೊಳಿಸುವ ಬಗ್ಗೆ ಚರ್ಚೆ ನಡೆಸಿದ್ದರು. ಅನರ್ಹರಿಗೂ ಬಿಜೆಪಿಗೂ ಸಂಬಂಧ ಇಲ್ಲ. ಅವರು ಯಾವ ಪಕ್ಷ ಸೇರುತ್ತಾರೆ ಎಂಬುದು ಗೊತ್ತಿಲ್ಲ ಎಂದು ಹೇಳಿದ್ದಾರೆ.