ಬೀದರ್ : ಪ್ರಚಾರ ಸಭೆಯೊಂದರಲ್ಲಿ ನರೇಂದ್ರ ಮೋದಿ ಪ್ರಧಾನಿಯಾಗಬೇಕು ಎನ್ನುವ ಮೂಲಕ ಮಾಜಿ ಸಿಎಂ ಸಿದ್ದರಾಮಯ್ಯ ಎಡವಟ್ಟು ಮಾಡಿಕೊಂಡಿದ್ದಾರೆ.

ಬೀದರ್ ನಲ್ಲಿ ನಡೆದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸಮಾವೇಶದಲ್ಲಿ ಮಾತನಾಡಿದ ಅವರು, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಯುಪಿಎ ಸರ್ಕಾರ ಅಧಿಕಾರಕ್ಕೆ ಬರಬೇಕು. ನರೇಂದ್ರ ಮೋದಿ ಪ್ರಧಾನಿಯಾಗಬೇಕು ಎಂದು ಹೇಳಿದ್ದಾರೆ.

ನಂತರ ತಪ್ಪಿನ ಅರಿವಾಗುತ್ತಿದ್ದಂತೆ ರಾಹುಲ್ ಗಾಂಧಿ ಪ್ರಧಾನಿಯಾಗಬೇಕು ಎಂದು ತಮ್ಮ ಹೇಳಿಕೆಯನ್ನು ಪೂರ್ಣಗೊಳಿಸಿದ್ದಾರೆ.!!!!